Free Sewing Machine: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ.! ಈ ದಾಖಲೆಗಳು ಕಡ್ಡಾಯ ಬೇಕು!
Free Sewing Machine Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ ದೇವರಾಜ್ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮ ನಿಯಮಿತದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಕರೆಯಲಾಗಿದ್ದು, ಅರ್ಹ ಆಸಕ್ತಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿ ಪ್ರಕಾರ ಅರ್ಜಿ ಸಲ್ಲಿಸಿ.
ಹೌದು ಪ್ರತಿ ವರ್ಷ ದೇವರಾಜ್ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮ ನಿಯಮತದಿಂದ ನಿರುದ್ಯೋಗಿಗಳಿಗೆ ತಮ್ಮ ಸ್ವಂತ ವ್ಯಾಪಾರ ಅಥವಾ ಉದ್ಯಮವನ್ನು ಪ್ರಾರಂಭಿಸಲು ಸಹಾಯವನ್ನು ಮಾಡುತ್ತಾ ಬಂದಿದೆ. ಇದೀಗ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಅರ್ಜಿಯನ್ನು ಕರೆಯಲಾಗಿದ್ದು, ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಿದ ಓದಿ.
ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ಅರ್ಹತೆಗಳು:
- ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗ ಪ್ರವರ್ಗ 1, 2A, 3A, 3B ಗೆ ಸೇರಿದವರಾಗಿರಬೇಕು.
- ಅರ್ಜಿದಾರರ ಆದಾಯ 1,20,000 ಒಳಗೆ ಇರಬೇಕು.
- ಅರ್ಜಿದಾರರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ಮೀರಬಾರದು.
- ಅರ್ಜಿದಾರರ ಕುಟುಂಬದಲ್ಲಿ ಯಾವುದೇ ಸರಕಾರಿ ನೌಕರರು ಇರಬಾರದು.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬೇಕಾಗುವ ದಾಖಲೆಗಳು:
- ಅರ್ಜಿದಾರರ ಜನ್ಮ ದಿನಾಂಕ ಹೊಂದಿರುವ ಪತ್ರ
- ಫೋಟೋ
- ಶೈಕ್ಷಣಿಕ ಅರ್ಹತೆ ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮತದಾರರ ಗುರುತಿನ ಚೀಟಿ
- ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯಿಂದ ನೀವು ಹೊಲಿಗೆ ವೃತ್ತಿ ಮಾಡುತ್ತಿರುವ ದೃಢೀಕರಣ ಪ್ರಮಾಣ ಪತ್ರ.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ:
ಕೆಳಗಡೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಮೇಲೆ ನೀಡುವ ಎಲ್ಲ ದಾಖಲೆಗಳು ಹಾಗೂ ಅರ್ಹತೆಯೊಂದಿಗೆ ಈ ದೇವರಾಜ್ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮ ನಿಯಮತಕ್ಕೆ ಅರ್ಜಿ ಸಲ್ಲಿಸುವ ಮುಖಾಂತರ ಉಚಿತ ಹೊಲಿಗೆ ಯಂತ್ರ ಪಡೆಯಬಹುದು.
ಅರ್ಜಿ ಸಲ್ಲಿಸುವ ಲಿಂಕ್: https://sevasindhu.karnataka.gov.in/