Free Gas Cylinder Scheme: ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ವವ್ ಪಡೆಯಲು ಅರ್ಜಿ ಆಹ್ವಾನ.! ಮಹಿಳೆಯರು ಕೂಡಲೇ ಹೀಗೆ ಅಪ್ಲೈ ಮಾಡಿ!
Free Gas Cylinder Yojana: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಈಗಿನ ದಿನಗಳಲ್ಲಿ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಡಿಗೆ ತಯಾರು ಮಾಡಲು ಗ್ಯಾಸ್ ಸಿಲಿಂಡರ್ ಬಳಕೆ ತುಂಬಾ ಹೆಚ್ಚಾಗಿದೆ. ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡಲು ಕೇಂದ್ರ ಸರ್ಕಾರದ ಉಜ್ವಲ್ 2.0 ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ.
ಹೌದು ಕೇಂದ್ರ ಸರ್ಕಾರದ ಉಜ್ವಲ್ 2.0 ಯೋಜನೆಯಿಂದ ಮಹಿಳೆಯರು ಅಡಿಗೆ ತಯಾರಿಸಲು ಬಹಳಷ್ಟು ಉಪಯೋಗವಾಗಿದೆ. ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ? ಮತ್ತು ಅರ್ಜಿ ಸಲ್ಲಿಸಲು ಅವೆಲ್ಲ ದಾಖಲೆಗಳು ಬೇಕು? ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಎಂಬ ಇತ್ಯಾದಿ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ ಓದಿ.
ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷ ಪೂರೈಸಬೇಕು
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು ಮತ್ತು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು.
- ಅರ್ಜಿದಾರರ ಕುಟುಂಬದಲ್ಲಿ ಯಾವುದೇ ಗ್ಯಾಸ್ ಕನೆಕ್ಷನ್ ಹೊಂದಿರಬಾರದು.
- ಹೊಸದಾಗಿ ಮದುವೆಯಾದ ನವದಂಪತಿಗಳು ರೇಷನ್ ಕಾರ್ಡ್ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾಗು ದಾಖಲೆಗಳು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಮೇಲ್ಗಡೆ ನೀಡಿರುವ ಎಲ್ಲ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿ ಕಚೇರಿಗೆ ಭೇಟಿ ನೀಡುವ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದು. ಅಥವಾ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಲಿಂಕ್: https://pmuy.gov.in/kn/ujjwala2.html