Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ.! ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!

Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ.! ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!

Gruhalakshmi Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯ ಸರ್ಕಾರದ 5 ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಪ್ರತಿ ತಿಂಗಳು 2000 ನೀಡುವ ಮೂಲಕ ತಮ್ಮ ಆರ್ಥಿಕತೆ ಜೀವನವನ್ನು ಹೋಗಲಾಡಿಸಲು ಬಹಳಷ್ಟು ಉಪಯೋಗವಾಗಿದೆ. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಹಣ ವಿಳಂಬಕ್ಕೆ ಹೊಸ ಸ್ಪಷ್ಟನೆ ನೀಡಿದ್ದಾರೆ ಇದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿದೆ ಓದಿ.

ಹೌದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ಮೇಡಂ ಎರಡು ತಿಂಗಳ ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದಾಗ ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ಕಾಗಿ ಉತ್ತರಿಸಿದ್ದಾರೆ. ಈ ಪ್ರಶ್ನೆಗೆ ಏನೆಂದು ಉತ್ತರಿಸಿದರು ಹಾಗೂ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏನೆಂದು ಹೇಳಿದ್ದಾರೆ ಎಂಬ ಮಾಹಿತಿ ಈ ಕೆಳಗೆ ನೀಡಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ:

ಗೃಹಲಕ್ಷ್ಮಿ ಯೋಜನೆ ಎರಡು ತಿಂಗಳ ಹಣ ಯಾಕೆ ಬಂದಿಲ್ಲ ಎಂದು ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಲಕ್ಷ್ಮಿ ಹೆಬ್ಬಾಳ್ಕರ್ ನಿಮಗೂ ಕೂಡ ಪ್ರತಿ ತಿಂಗಳು ಸರಿಯಾಗಿ ಸಂಬಳ ಬರುತ್ತಾ ಎಂದು ಮರು ಪ್ರಶ್ನೆಯನ್ನು ಹಾಕಿದ್ದಾರೆ. ಮಾಧ್ಯಮಗಾರರು ಹೌದು ಮೇಡಂ ನಮಗೆ ಪ್ರತಿ ತಿಂಗಳು ಸಂಬಳ ಬರುತ್ತದೆ ಎಂದು ಹೇಳಿಕೆಯನ್ನು ನೀಡಿದ್ದರು. ಲಕ್ಷ್ಮಿ ಹೆಬ್ಬಾಳ್ಕರ್ ಹಾಗಿಲ್ಲ ಸರ್ಕಾರಿ ಸಂಸ್ಥೆ ಗಳಲ್ಲಿ 1,2,3 ತಿಂಗಳಿಗೆ ಸಂಬಳವನ್ನು ನೀಡುತ್ತಾರೆ, ಎಂದು ಹೇಳಿಕೆಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಒಂದು ತಿಂಗಳಿನ ಹಣ ತಡವಾದರೂ ಕೂಡ 500 ರವರೆಗೆ ಫೋನ್ ಕಾಲ್ಗಳು ಬರುತ್ತವೆ, ಅವುಗಳನ್ನು ಸಮಾಧಾನ ಪಡಿಸುವುದರಲ್ಲಿ ಸಮಯವೇ ವ್ಯರ್ಥವಾಗುತ್ತದೆ. ಹಾಗೂ ವಿರೋಧ ಪಕ್ಷದ ನಾಯಕರು ಕೂಡ ಈ ತಿಂಗಳ ಹಣ ಬಂದಿಲ್ಲವೆಂದರೆ ಮುಂದಿನ ತಿಂಗಳು ಕೂಡ ಹಣ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಯಾರು ಈ ಮಾತುಗಳಿಗೆ ಕಿವಿ ಕೊಡಬೇಡಿ, ಯಾಕೆಂದರೆ ಸ್ವಲ್ಪ ಹಣ ಹಾಕಲು ಸ್ವಲ್ಪ ತಾಂತ್ರಿಕ ಸಮಸ್ಯೆ ಆಗಿರುವುದರಿಂದ ಇನ್ನೂ ಕೆಲವೇ ದಿನಗಳಲ್ಲಿ ಎಲ್ಲ ತಿಂಗಳ ಹಣ ಬಂದು ಖಾತೆಗೆ ಜಮಾ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಈ ಒಂದು ಮಾತನ್ನು ಹಂಚಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಇನ್ನೂ ಸಾಕಷ್ಟು ಧೈರ್ಯವನ್ನು ತುಂಬುವ ಮೂಲಕ ಹೇಳಿಕೆಯನ್ನು ನೀಡಿದ್ದಾರೆ.