Karnataka Police Recruitment: ಕರ್ನಾಟಕ ಪೋಲಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ಪಾಸಾದವರಿಗೆ ಅವಕಾಶ!
Karnataka Police Recruitment: ನಮಸ್ಕಾರ ಎಲ್ಲ ಕರ್ನಾಟಕ ಜನತೆಗೆ, ರಾಜ್ಯದಲ್ಲಿ ಬಹಳಷ್ಟು ದಿನಗಳ ಬಳಿಕ ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ತಯಾರಿ ನಡೆಸಲಾಗಿದೆ. ಶೀಘ್ರದಲ್ಲೇ 4,115 ಹುದ್ದೆಗಳಿಗೆ ಅಧಿಕೃತ ನೇಮಕಾತಿ ಹೊರಬೀಳಲಿದೆ ಇದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ ಓದಿ.
ಹೌದು ಬಹಳಷ್ಟು ದಿನಗಳ ಬಳಿಕ ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗುತ್ತಿದೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಯಾವೆಲ್ಲ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ? ಅರ್ಜಿ ಸಲ್ಲಿಸುವ ದಿನಾಂಕ ಯಾವಾಗ ಪ್ರಕಟಿಸಲಾಗುತ್ತದೆ? ಎಂಬು ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಿದೆ.
ಹುದ್ದೆಗಳ ಸಂಪೂರ್ಣ ವಿವರ:
- ಪೊಲೀಸ್ ಕಾನ್ಸ್ಟೇಬಲ್: 3,500
- ಪೊಲೀಸ್ ಸಬ್ ಇನ್ಸ್ಪೆಕ್ಟರ್: 615
- ಒಟ್ಟು ಹುದ್ದೆಗಳ ಸಂಖ್ಯೆ: 4,115
ಶೈಕ್ಷಣಿಕ ಅರ್ಹತೆ:
- ಇನ್ನು ಕೆಲವಷ್ಟು ದಿನಗಳಲ್ಲಿ 4,115 ಪೊಲೀಸ್ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿಯನ್ನು ಕರೆಯಲಾಗುತ್ತದೆ. ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಹೊಂದಿರಬೇಕು.
- CAR/DAR ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ SRP, KSRP ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು.
- ಪೊಲೀಸ್ ಕಾನ್ಸ್ಟೇಬಲ್ (CVIL) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 12ನೇ ತರಗತಿ ಪಾಸ್ ಆಗಿರಬೇಕು. ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪೂರ್ಣಗೊಳಿಸಿದರೆ ಸಾಕು.
ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಅರ್ಜಿ ಯಾವಾಗ:
ಈ ಮೇಲೆ ನೀಡಿರುವ ಎಲ್ಲಾ ಹುದ್ದೆಗಳಿಗೆ ಇನ್ನೂ ಕೆಲವೇ ದಿನಗಳಲ್ಲಿ ಅರ್ಜಿಯನ್ನು ಕರೆಯಲಾಗುತ್ತದೆ ಅಂದರೆ ಮೂರು ತಿಂಗಳ ಒಳಗಾಗಿ ಅರ್ಜಿಯನ್ನು ಕರೆಯಲಾಗುತ್ತದೆ ಎಂದು ಇಲಾಖೆಯು ತಿಳಿಸಿದೆ ಹಾಗೂ ಇನ್ನು 45 ದಿನಗಳ ಒಳಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಗೃಹ ಇಲಾಖೆ ತಿಳಿಸಿದೆ.
ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಾಹಿತಿ ಹಾಗೂ ಎಲ್ಲಾ ಸಂಪೂರ್ಣ ಮಾಹಿತಿ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗುವ ಎಲ್ಲ ಲಕ್ಷಣಗಳು ತಿಳಿದು ಬಂದಿದೆ.