Labour Card Scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಕೂಡಲೇ ಅರ್ಜಿ ಸಲ್ಲಿಸಿ ₹11,000 ಪಡೆಯಿರಿ!
Labour Card Scholarship 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಸ್ಕಾಲರ್ಶಿಪ್ ಯೋಜನೆಗಳು ಜಾರಿಗೆ ಬರುತ್ತಿವೆ. ಅದರಲ್ಲಿ ಒಂದಾದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಆಗಿದೆ. ಈ ಸ್ಕಾಲರ್ಶಿಪ್ ಇಂದ ವಿದ್ಯಾರ್ಥಿಗಳು ತಮ್ಮ ಬಡತನದಲ್ಲಿ ಶಿಕ್ಷಣ ಪೂರ್ಣಗೊಳಿಸಲು ಸಹಾಯಕವಾಗಲಿದೆ. ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಿದೆ ಓದಿ.
ಹೌದು ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಸಿಹಿ ಸುದ್ದಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸುಗಮಗೊಳಿಸಲು ಲೇಬರ್ ಕಾರ್ಡ್ ಇಂದ ಸ್ಕಾಲರ್ಶಿಪ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕೆಳಗೆ ನೀಡಿರುವ ಅರ್ಹತೆ ಹಾಗೂ ಎಷ್ಟರವರೆಗೆ ಹಣದ ಪ್ರಯೋಜನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದರ ಸಂಪೂರ್ಣ ವಿವರ ಈ ಕೆಳಗೆ ನೀಡಿದೆ.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳು:
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಪೋಷಕರು ಲೇಬರ್ ಕಾರ್ಡ್ ಹೊಂದಿರಬೇಕು.
- ವಿದ್ಯಾರ್ಥಿಯ ಆದಾಯ 35,000 ಕ್ಕಿಂತ ಕಡಿಮೆ ಇರಬೇಕು.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಪರೀಕ್ಷೆಯಲ್ಲಿ ಶೇಕಡ 50 ಅಂಕಗಳೊಂದಿಗೆ ಪಾಸಾಗಿರಬೇಕು. ಎಸ್ಟಿ/ಎಸ್ಸಿ ವಿದ್ಯಾರ್ಥಿಗಳು ಶೇಕಡ 45 ಅಂಕಗಳೊಂದಿಗೆ ಪಾಸಾಗಿರಬೇಕು.
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪ್ರಯೋಜನ:
- 1ನೇ ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ: ₹3,000
- 11ನೇ ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ: ₹4,600
- ಪದವಿ ವಿದ್ಯಾರ್ಥಿಗಳಿಗೆ: ₹6,000
- ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ: 10,000 ರಿಂದ 11000ವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ತಂದೆ ತಾಯಿ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಪ್ರವೇಶ ಪಡೆದ ವರ್ಷದ ಸುಲ್ಕ ರಶೀದಿ
- ವಿದ್ಯಾರ್ಥಿಯ ವಯಕ್ತಿಕ ವಿವರ
ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ವಿದ್ಯಾರ್ಥಿಗಳು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಲಿಂಕ್: https://klwbapps.karnataka.gov.in/student/register