New Ration Card: ನಾಳೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಈ ದಾಖಲೆಗಳು ಕಡ್ಡಾಯವಾಗಿ ಬೇಕು ನೋಡಿ!

New Ration Card: ನಾಳೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಈ ದಾಖಲೆಗಳು ಕಡ್ಡಾಯವಾಗಿ ಬೇಕು ನೋಡಿ!

New Ration Card: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಕಷ್ಟು ಜನ ಕಾಯ್ದು ಕುಳಿತಿದ್ದಾರೆ ಅಂತ ಜನರಿಗೆ ಇದೀಗ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸಿಹಿ ಸುದ್ದಿ ನೀಡಿದೆ.

ನಾಳೆ ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅರ್ಜಿ ಪ್ರಾರಂಭವಾಗುತ್ತಿದ್ದು ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಹಾಗೂ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಮತ್ತು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ವಿವರ ಈ ಕೆಳಗೆ ನೀಡಿದ ಓದಿ.

ರಾಜ್ಯದಲ್ಲಿ ಬಿಡುಗಡೆಯಾಗುವ ಹೊಸ ಯೋಜನೆಗಳು ಮತ್ತು ಇದೀಗ ಇರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕು ಹಾಗೂ ಮನೆಗಳಿಗೆ ಉಚಿತ ರೇಷನ್ ಪಡೆಯಲು ಈ ಒಂದು ಚೀಟಿ ಮುಖ್ಯವಾಗಿದೆ. ಸಾಕಷ್ಟು ಜನರು ಈ ಒಂದು ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಾರೆ, ಅಂತವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಹೊಸ ರೇಷನ್ ಕಾರ್ಡ್ ಪಡೆಯಲು ಯಾವೆಲ್ಲ ಅರ್ಹತೆಗಳು ಬೇಕು:

  • ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
  • ಕುಟುಂಬದಲ್ಲಿ ರೇಷನ್ ಕಾರ್ಡ್ ಇಲ್ಲದಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
  • ಹೊಸದಾಗಿ ಮದುವೆಯಾದ ಗಂಡ ಹೆಂಡತಿ ಅರ್ಜಿಯನ್ನು ಸಲ್ಲಿಸಬಹುದು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಆಹಾರ ಇಲಾಖೆ ನಿಯಮದ ಪ್ರಕಾರ ಇರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ಆದಾಯದ ಮೇಲೆ ವಿವಿಧ ರೀತಿಯ ರೇಷನ್ ಕಾರ್ಡ್ ನೀಡಲಾಗುತ್ತದೆ.

ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ವೋಟರ್ ಐಡಿ
  • ಡ್ರೈವಿಂಗ್ ಲೈಸೆನ್ಸ್ (ಇದ್ದಲ್ಲಿ ಮಾತ್ರ)
  • ಜನನ ಪ್ರಮಾಣ ಪತ್ರ ( ಐದು ವರ್ಷಕ್ಕಿಂತ ಚಿಕ್ಕ ಮಗು ಇದ್ದರೆ ಮಾತ್ರ)
  • ಫೋಟೋ
  • ವಯಸ್ಸಿನ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

ಹೊಸ ರೇಷನ್ ಕಾರ್ಡ್ ಅರ್ಜಿ ಎಲ್ಲಿ ಸಲ್ಲಿಸಬೇಕು ಮತ್ತು ಯಾವಾಗ:

ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಶೀಘ್ರದಲ್ಲಿ ಕರೆಯಲಾಗುತ್ತದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ. ಆದ್ದರಿಂದ ಮೇಲೆ ನೀಡಿರುವ ಅರ್ಹತೆಗಳು ಹಾಗೂ ದಾಖಲೆಗಳೊಂದಿಗೆ ಸಿದ್ಧವಾಗಿರಿ ಕೂಡಲೇ ಹೊಸ ರೇಷನ್ ಕಾರ್ಡಗೆ ಅರ್ಜಿಯನ್ನು ಕರೆದ ತಕ್ಷಣ ಅರ್ಜಿಯನ್ನು ಸಲ್ಲಿಸಿ.